Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕಾವೇರಿ- ಮಹದಾಯಿ ಜಲವಿವಾದ: ಕಾನೂನು ಹೋರಾಟಕ್ಕೆ ಸರ್ವಪಕ್ಷ ಸಭೆಯಲ್ಲಿ ಒಮ್ಮತ

0

ಬೆಂಗಳೂರು:ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆಯಿತು.

ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ಅವರು, ರಾಜ್ಯದ ಜಲ ಪರಿಸ್ಥಿತಿ, ವಾಸ್ತವಾಂಶವನ್ನು ವಿವರಿಸಿದರು.

ನೀರಾವರಿ ವಿಷಯದಲ್ಲಿ ರಾಜಕೀಯ ಪಕ್ಕಕ್ಕಿಡೋಣ. ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರದ ಕಾನೂನು ಹೋರಾಟ ಮುಂದುವರೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರು ಸಹಕರಿಸಬೇಕು. ಎಲ್ಲರೂ ಒಟ್ಟಾಗಿ ರಾಜ್ಯದ ಹಿತ ಕಾಯೋಣ ಎಂದರು.

ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್‌ ವೈಫಲ್ಯದಿಂದಾಗಿ 2023-24ರ ಜಲ ವರ್ಷವು ಸಂಕಷ್ಟದ ವರ್ಷವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್‌ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್‌ 10 ರಂದು 1,5000 ಕ್ಯೂಸೆಕ್‌ ನೀರು ಬಿಡಲು ಸೂಚಿಸಿತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯೂಸೆಕ್‌ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಾಧೀಶರ ಪೀಠದ ಮುಂದೆ ವಿಚಾರಣೆಗೆ ಬರಲಿದೆ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಸಭೆಯಲ್ಲಿ ಮಾಹಿತಿ ಹಂಚಿಕೊಂಡರು.

ಬಳಿಕ ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವೀರಪ್ಪ ಮೊಯಿಲಿ, ಸಂಸದರಾದ ಸುಮಲತಾ, ಜಗ್ಗೇಶ್, ಡಾ. ಹನುಮಂತಯ್ಯ, ಮುನಿಸ್ವಾಮಿ, ಜಿ.ಎಂ. ಸಿದ್ದೇಶ್ವರ, ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು. ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹಿರಿಯ ವಕೀಲರಾದ ಮೋಹನ್‌ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Leave A Reply

Your email address will not be published.