ಬೆಂಗಳೂರು: ಮುಖಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಬಿಜೆಪಿ ಸ್ಟಾರ್ ಪ್ರಚಾರಕ ಆಗಿರುವ ನಟ ಸುದೀಪ್ ಅವರು ಪ್ರಚಾರ ಆರಂಭಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಶಿಗ್ಗಾವಿ-ಸವಣೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆ ಶಿಗ್ಗಾವಿಗೆ ಆಗಮಿಸಲಿರುವ ಸುದೀಪ್, ಸಿಎಂ ಬೊಮ್ಮಾಯಿ ಪರ ಪ್ರಚಾರ ನಡೆಸುತ್ತಿದ್ದಾರೆ.
ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಇತರೆ ಗಣ್ಯರು ಬಸವರಾಜ ಬೊಮ್ಮಾಯಿ ಅವರಿಗೆ ಸಾಥ್ ನೀಡಿದ್ದಾರೆ.