ಕೆನಡಾ: ಭಾರತದ ವಾಂಟೆಡ್ ಉಗ್ರರಲ್ಲಿ ಒಬ್ಬನಾಗಿದ್ದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ.
ಕೆನಡಾದ ಸರ್ರೆ ನಗರದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಿಜ್ಜರ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ಕಾರಣ ಮತ್ತು ಹಂತಕರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ.
ಆಟವಾಡಲು ತೆರಳಿದ್ದ ಮೂವರು ಮಕ್ಕಳು ನಾಪತ್ತೆ ಪ್ರಕರಣ: ಕಾರಿನಲ್ಲಿ ಮಕ್ಕಳ ಮೃತದೇಹ ಪತ್ತೆ
ನಿಜ್ಜರ್ ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಮತ್ತು ಪ್ರತ್ಯೇಕತಾವಾದಿ ನಾಯಕನಾಗಿದ್ದ. ಹಲವಾರು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ, 2011ರಲ್ಲಿ ಪಂಜಾಬ್‌ನ ಜಲಂಧರ್‌ನಲ್ಲಿ ಹಿಂದೂ ಅರ್ಚಕರನ್ನು ಗುರಿಯಾಗಿಸಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದ. ರಾಷ್ಟ್ರೀಯ ತನಿಖಾ ಸಂಸ್ಥೆಯು ಆತನನ್ನು ಹಿಡಿದುಕೊಟ್ಟವರಿಗೆ 10 ಲಕ್ಷ ರು. ನೀಡುವುದಾಗಿ ಘೋಷಿಸಿತ್ತು. ಭಾರತ ಸರ್ಕಾರವು ಇತ್ತೀಚೆಗೆ ಬಿಡುಗಡೆ ಮಾಡಿದ ವಾಂಟೆಡ್ ಉಗ್ರರ ಪಟ್ಟಿಯಲ್ಲಿ ನಿಜ್ಜರ್ ಹೆಸರು ಇದೆ.