ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು CCBಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ B.ದಯಾನಂದ್ ಆದೇಶ ಹೊರಡಿಸಿದ್ದಾರೆ.
ಇದರ ತನಿಖೆಯನ್ನು ಸರ್ಕಾರವು CCB ಹೆಗಲಿಗೆ ಒಪ್ಪಿಸಿದ್ದು, ತನಿಖಾಧಿಕಾರಿಯಾಗಿ ACP ನವೀನ್ ಕುಲಕರ್ಣಿ ನೇಮಕಗೊಂಡಿದ್ದಾರೆ.
ವಿವಿಧ ತನಿಖಾ ತಂಡ ರಾತ್ರಿಯೆಲ್ಲಾ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದು, ಸ್ಥಳದಲ್ಲಿ ಬಾಂಬ್ ಸ್ಯಾಂಪಲ್ ಸಂಗ್ರಹ ಮಾಡಲಾಗಿದೆ.
ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯಲ್ಲಿ ಗಾಯಗೊಂಡ 9 ಜನರಿಗೂ ಚಿಕಿತ್ಸೆ ನೀಡಲಾಗುತ್ತಿದೆ.