ಉನ್ನತ ಶಿಕ್ಷಣಕ್ಕೆ 10 ಲಕ್ಷದ ವರೆಗೆ ಸಾಲ ಸೌಲಭ್ಯ ಈ ವರ್ಷ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.54 ಲಕ್ಷ ಕೋಟಿ ರೂ. 2024-2025 ರ ಬಜೆಟ್ ಮಂಡನೆ ವೇಳೆ ನಿರ್ಮಲಾ ಸೀತಾರಾಮನ್ ಕಳೆದ ವರ್ಷದ ಸಾಧನೆ ಬಗ್ಗೆ ವಿವರಣೆ ನೀಡಿದ್ದಾರೆ. ಭಾರತದ ಆರ್ಥಿಕತೆ ಸ್ಥಿತವಾಗಿದೆ. ದೇಶದ ಹಣದುಬ್ಬರ ಶೇಕಡಾ 3.1 ರಷ್ಟಿದೆ ಎಂದು ಹೇಳಿದ್ದಾರೆ. ಎನ್ಡಿಎ ಸರ್ಕಾರ ಜನರಿಗಾಗಿ ಉದ್ಯೋಗ, ಕೌಶಲ್ಯ, ಎಂಎಸ್ಎಂಇ, ಮಧ್ಯಮ ವರ್ಗಕ್ಕೆ ಬಜೆಟ್ನಲ್ಲಿ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.