ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಿಗ್ ಶಾಕ್ ನೀಡಿದೆ. ಎಚ್.ಡಿ. ಕುಮಾರಸ್ವಾಮಿ ಅವರ ಜಾಮೀನು ರದ್ದು ಕೋರಿ ಲೋಕಾಯುಕ್ತ ಎಸ್‌ಐಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಕುಮಾರಸ್ವಾಮಿ ಅವರು ಶ್ರೀ ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದಾರೆ. ಈ ಹಗರಣದಲ್ಲಿ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ಮೊನ್ನೆ ಅಷ್ಟೇ ಎಚ್.ಡಿ ಕುಮಾರಸ್ವಾಮಿ ಅವರು ಎಸ್‌ಐಟಿ ಮುಖ್ಯಸ್ಥರ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಹಂದಿಗೆ ಹೋಲಿಸಿ ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ಸಿಬ್ಬಂದಿಗೆ ಪತ್ರ ಬರೆದಿದ್ದರು.