ನವದೆಹಲಿ: ಕೇಂದ್ರ ಸರಕಾರ ಮಾತ್ರ ಜಾತಿ ಜನಗಣತಿ ಮಾಡಬಹುದು. ಈ ಅಧಿಕಾರ ರಾಜ್ಯ ಸರಕಾರಗಳಿಗೆ ಇಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. 1948ರ ಜನಗಣತಿ ಕಾಯ್ದೆಯು ಜನಗಣತಿ ನಡೆಸಲು ಸರ್ಕಾರಕ್ಕೆ ಮಾತ್ರ ಅಧಿಕಾರ ನೀಡುತ್ತದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್’ಗೆ ಅಫಿಡವಿಟ್ ಸಲ್ಲಿಸಿದೆ. ಕೇಂದ್ರದ ಈ ಕ್ರಮವು ಬಿಹಾರ ಸರ್ಕಾರಕ್ಕೆ ಸವಾಲಾಗಿದ್ದು, ಬಿಹಾರದಲ್ಲಿ ಜಾತಿ ಜನಗಣತಿಯ ಸಮೀಕ್ಷೆಯನ್ನು ಆಗಸ್ಟ್ 6 ರೊಳಗೆ ನಡೆಸಲಾಗಿದೆ ಎಂದು ಹಿಂದಿನ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಭಾರತದ ಸಂವಿಧಾನದ ನಿಬಂಧನೆಗಳು ಮತ್ತು ಅನ್ವಯವಾಗುವ ಕಾನೂನಿಗೆ ಅನುಗುಣವಾಗಿ ಎಸ್‌ಸಿ / ಎಸ್‌ಟಿ / ಎಸ್ಇಬಿಸಿ ಮತ್ತು ಒಬಿಸಿಗಳ ಉನ್ನತಿಗಾಗಿ ಎಲ್ಲಾ ಸಕಾರಾತ್ಮಕ ಕ್ರಮಗಳನ್ನ ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಸರ್ಕಾರ ಹೇಳಿದೆ. ಬಿಹಾರ ಸರ್ಕಾರ ಆದೇಶಿಸಿದ್ದ ಜಾತಿ ಸಮೀಕ್ಷೆಯನ್ನು ಎತ್ತಿಹಿಡಿದ ಪಾಟ್ನಾ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿವಿಧ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಜಾತಿಗಳ ಆಧಾರದ ಮೇಲೆ ಸಮೀಕ್ಷೆ ನಡೆಸುವ ನಿತೀಶ್ ಕುಮಾರ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಪಾಟ್ನಾ ಹೈಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ಬಿಹಾರ ಜಾತಿ ಸಮೀಕ್ಷೆಯು 534 ಬ್ಲಾಕ್‌ಗಳು ಮತ್ತು 261 ನಗರ ಸ್ಥಳೀಯ ಸಂಸ್ಥೆಗಳನ್ನ ಹೊಂದಿರುವ 38 ಜಿಲ್ಲೆಗಳ ಅಂದಾಜು 2.58 ಕೋಟಿ ಕುಟುಂಬಗಳಲ್ಲಿ ಅಂದಾಜು 12.70 ಕೋಟಿ ಜನಸಂಖ್ಯೆಯನ್ನ ಒಳಗೊಳ್ಳುತ್ತದೆ.
[vc_row][vc_column]
BREAKING NEWS
- ಸ್ಲೀಪ್ ಮೋಡ್ ನಿಂದ ಎಚ್ಚರವಾಗುತ್ತಾ ವಿಕ್ರಂ, ಪ್ರಗ್ಯಾನ್?
- ಭಾರತ ಕೊಟ್ಟ ಅಧ್ಯಕ್ಷೀಯ ಸೂಟ್ ನಿರಾಕರಿಸಿದ್ದ ಜಸ್ಟಿನ್ ಟ್ರುಡೋ
- ಟಿವಿ ವಾಹಿನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ದೇಶನ
- ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ 19 ವರ್ಷದ ಆಂಟಿಮ್ ಪಂಗಲ್
- ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!
- ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್.! ಈ ಮಾನದಂಡಗಳು ಇಲ್ಲ.!
- ಈ ಕಾರಣಕ್ಕೆ ಮೈಸೂರು ದಸರ ಸರಳ.! ಡಾ.ಹೆಚ್.ಸಿ ಮಹದೇವಪ್ಪ
- ಇಂದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಮಹತ್ವದ ದಿನವಾಗುತ್ತಾ.?
- ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ.!
- ಗಣಪತಿ ವಿಸರ್ಜನೆ : ಈ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ.!