ಬೆಂಗಳೂರು: ತೆರಿಗೆ ಹಂಚಿಕೆ, ಜಿ.ಎಸ್.ಟಿ ಪರಿಹಾರ, ಬರ ಮತ್ತು ನೆರೆ ಪರಿಹಾರ ಹಾಗೂ ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನದ ಹಂಚಿಕೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಹೀಗಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಫೆ. 7 ರಂದು ನವ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕರ್ನಾಟಕದ ಪಾಲಿನ ಹಣ ನೀಡದ ಕೇಂದ್ರದ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ಇಡೀ ಕರ್ನಾಟಕ ಸರ್ಕಾರ ಧರಣಿ ನಡೆಸಲಿದೆ ಎಂದು ಉಭಯ ನಾಯಕರು ತಿಳಿಸಿದ್ದು ಆದ್ದ್ರಿಂದ ನಾವು ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನಮ್ಮ ಇಡೀ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ ಮಾಡಲಿದ್ದು, ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಸಂಸದರು ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.