ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಯುವಕನೊಬ್ಬ ಕೇದಾರನಾಥ ಯಾತ್ರೆಗೆ ತೆರಳಿದ್ದು ಈ ವೇಳೆ ಮೃತಪಟ್ಟ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ಗಿರೀಶ್ (25) ಮೃತ ಯುವಕ
ಗಿರೀಶ್ ಅವರು ಮೂಡಿಗೆರೆಯಲ್ಲಿ ಅಡುಗೆ ವೃತ್ತಿ ಮಾಡುತ್ತಿದ್ದು, ಕಳೆದ ವಾರವಷ್ಟೇ ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇನ್ನು ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಕುರಿತು ಕೇದಾರನಾಥ ಪೊಲೀಸರು ಗಿರೀಶ್ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.