Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕೇರಳದಲ್ಲಿ ನಿಫಾ ವೈರಸ್ ನಿಯಂತ್ರಣ – ನಿರ್ಬಂಧ ಸಡಿಲ

0

ಕೇರಳ: ನಿಫಾ ವೈರಸ್​ನ ಹೊಸ ಪ್ರಕರಣಗಳು ವರದಿಯಾಗದ ಹಿನ್ನೆಲೆಯಲ್ಲಿ ಕೇರಳದಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಕೇರಳದ 9 ಗ್ರಾಮ ಪಂಚಾಯ್ತಿಗಳಲ್ಲಿ ಕಂಟೈನ್ಮೆಂಟ್​ ವಲಯಗಳನ್ನು ನಿರ್ಮಿಸಲಾಗಿದ್ದು, ಇದೀಗ ಪ್ರಕರಣಗಳು ವರದಿಯಾಗದ ಹಿನ್ನಲೆಯಲ್ಲಿ ಈ ನಿರ್ಬಂಧಗಳನ್ನು ಕೋಯಿಕ್ಕೋಡ್​ ಜಿಲ್ಲಾಡಳಿತ ಗುರುವಾರ ಹಿಂತೆಗೆದುಕೊಂಡಿದೆ.

ಇನ್ನು ಕೋಯಿಕ್ಕೋಡ್​ನಲ್ಲಿಇಲ್ಲಿಯವರೆಗೆ 6 ನಿಫಾ ವೈರಸ್​ ಪ್ರಕರಣಗಳು ಪತ್ತೆಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಫಾ ವೈರಸ್​ ಲಕ್ಷಣಗಳೆಂದರೆ ಜ್ವರ, ಮೈ ಕೈ ನೋವು, ಸ್ನಾಯುಗಳ ನೋವು, ತಲೆನೋವು, ಸುಸ್ತು, ವಾಂತಿ. ನಿಫಾ ವೈರಸ್ ಮನುಷ್ಯರಲ್ಲಿ ಬಹಳ ವೇಗವಾಗಿ ಹರಡುತ್ತದೆ. ನಿಫಾ ವೈರಸ್ ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ. ಅದೇ ರೀತಿ ಪ್ರಾಣಿಗಳಿಂದ ಮನುಷ್ಯರಿಗೂ ಹರಡುತ್ತದೆ ಎನ್ನಲಾಗಿದೆ.

Leave A Reply

Your email address will not be published.