ಮೈಸೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಎಫ್‌ಐಆರ್ ದಾಖಲಿಸಿದೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಎಫ್‌ಐಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದು, ಸಿಎಂ ಪತ್ನಿ ಪಾರ್ವತಿ ಎ2, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಎ3, ಭೂಮಾಲೀಕ ದೇವರಾಜು ಎ4 ಹಾಗೂ ಇತರರು ಎ5 ಎಂದು ಉಲ್ಲೇಖಿಸಲಾಗಿದೆ. ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. *ಐಪಿಸಿ ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ * ಸೆಕ್ಷನ್166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ * ಸೆಕ್ಷನ್ 403 ಆಸ್ತಿಯ ದುರ್ಬಳಕೆ * ಸೆಕ್ಷನ್ 420 ವಂಚನೆ *ಸೆಕ್ಷನ್ 426 ದುಷ್ಕೃತ್ಯವೆಸಗುವುದು * ಸೆಕ್ಷನ್ 465 ಪೋರ್ಜರಿ * ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ *ಸೆಕ್ಷನ್ 340 ಅಕ್ರಮ ಬಂಧನ * ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು ಒಟ್ಟಾರೆಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.