ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ನಿರ್ದೇಶನಾಲಯದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡ ಉಪಯೋಜನೆಯಡಿ, 2023-2024ನೇ ಸಾಲಿಗೆ ಅಂತರಾಷ್ಟ್ರಿಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ಹಾಗೂ ಸ್ವಯಂ ಉದ್ಯೋಗ ಯೋಜನೆಯಡಿ ಜಿಮ್ ಸ್ಥಾಪನೆಗೆ ಸಲಕರಣೆಗಳನ್ನು ನೀಡಲಾಗುವುದು.
ಪ್ರೋತ್ಸಾಹ ಧನಕ್ಕೆ 2022 ನೇ ವರ್ಷದ ಜನವರಿ 1 ರಿಂದ ಡಿಸೆಂಬರ್ 31 ವರೆಗೆ ಪದವಿ ವಿಜೇತರಾದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಕ್ರೀಡಾಪಟುಗಳು ಸೆಪ್ಟೆಂಬರ್ 6 ಒಳಗಾಗಿ ಕ್ರೀಡಾ ಇಲಾಖೆಯಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ, ಸೆಪ್ಟಂಬರ್ 8 ರೊಳಗಾಗಿ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.