ಬೆಂಗಳೂರು: ಯಾವುದೇ ಖಾಸಗಿ ದೇವಾಲಯಗಳನ್ನು ಮುಜರಾಯಿ ಇಲಾಖೆ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಖಾಸಗಿ ದೇಗುಲಗಳನ್ನು ಮುಜರಾಯಿ ವ್ಯಾಪ್ತಿಗೆ ತರಲು ಸರ್ಕಾರ ಪ್ಲಾನ್ ಮಾಡುತ್ತಿದೆ ಎಂಬ ವರದಿಗಳನ್ನು ಅವರು ತಳ್ಳಿಹಾಕಿದರು.
ಕೆಲ ಹಿಂದೂ ಸಂಘಟನೆಗಳು ಸರಿಯಾದ ಮಾಹಿತಿ ಇಲ್ಲದೆ ಇಂತಹ ಆರೋಪ ಮಾಡುತ್ತಿವೆ ಎಂದು ಹೇಳಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವ ದೇವಾಲಯವನ್ನೂ ಸ್ವಾಧೀನಪಡಿಸಿಕೊಂಡಿಲ್ಲ ಎಂದರು.