ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಇಂದು ಬೆಳಗ್ಗೆ 7:30 ಗಂಟೆ ಕರೆದುಕೊಂಡು ಬರುತ್ತೇನೆ, ಮನೆ ಬಳಿ 11:30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. 12 ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಗುತ್ತದೆ. ಬನಶಂಕರಿ ಎರಡನೇ ಹಂತದಲ್ಲಿರೋ ಮನೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅಪರ್ಣಾ ಪತಿ ತಿಳಿಸಿದ್ದಾರೆ.