ಗುದನಾಳದಲ್ಲಿ 1 ಕೆಜಿ ಚಿನ್ನ ಬಚ್ಚಿಟ್ಟು ಕಳ್ಳ ಸಾಗಾಟ- ಗಗನಸಖಿ ಅರೆಸ್ಟ್‌

WhatsApp
Telegram
Facebook
Twitter
LinkedIn

ಕೇರಳ: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಗಗನಸಖಿಯೊಬ್ಬರನ್ನು ಚಿನ್ನವನ್ನು ಕಳ್ಳಸಾಗಣೆ ಮಾಡಿ ಗುದನಾಳದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಶುಕ್ರವಾರ ತಿಳಿಸಿದೆ.

ಗಗನಸಖಿ ಸುರಭಿ ಖಾತುನ್ ಎಂದು ಗುರುತಿಸಲಾಗಿದೆ. ಈಕೆ ಕೋಲ್ಕತ ಮೂಲದವಳು. ಮಸ್ಕತ್​​ನಿಂದ ಕಣ್ಣೂರಿಗೆ ಆಗಮಿಸಿದ ಏರ್ ಇಂಡಿಯಾ ಎಕ್ಸ್​ಪ್ರೆಸ್​ನಲ್ಲಿ ಸುರಭಿ ಗಗನಸಖಿಯಾಗಿದ್ದಳು.

ಆಕೆಯ ಗುದನಾಳದಲ್ಲಿ ಸುಮಾರು 960 ಗ್ರಾಂ ಚಿನ್ನವನ್ನು ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ನಂತರ ಸುರಭಿ ಖತುನ್ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು .ಬಳಿಕ ಸುರಭಿಯನ್ನ 14 ದಿನಗಳ ಕಸ್ಟಡಿಗೆ ನೀಡಲಾಗಿದೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon