Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

‘ಗೃಹಲಕ್ಷ್ಮಿ ಯೋಜನೆಯಡಿ 1.10 ಕೋಟಿ ಕುಟುಂಬಗಳ ನೋಂದಣಿ, ಆ.30ಕ್ಕೆ ಮೈಸೂರಲ್ಲಿ ಯೋಜನೆಗೆ ಚಾಲನೆ’: ಲಕ್ಷ್ಮೀ ಹೆಬ್ಬಾಳ್ಕರ್

0

ಮೈಸೂರು: ರಾಜ್ಯ ಸರ್ಕಾರದ ಐದು ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಚಾಲನೆ ಸಿಗಲಿದೆ. ರಾಜ್ಯದ 1 ಕೋಟಿ 10 ಲಕ್ಷ ಕುಟುಂಬಗಳ ಯಜಮಾನಿಯರ ಖಾತೆಗಳಿಗೆ ತಲಾ 2 ಸಾವಿರ ರೂ. ಜಮೆಯಾಗಲಿದೆ. ಇದರಲ್ಲಿ ಮೈಸೂರು ಭಾಗದ 4 ಜಿಲ್ಲೆಗಳ 13,81,430 ಕುಟುಂಬಗಳು ಸೇರಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಭಾನುವಾರ ನಡೆದ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳ ಹಾಗೂ ಜಿ.ಪಂ ಸಿಇಓಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ ಹೆಚ್ ಸಿ ಮಹಾದೇವಪ್ಪ

ಸುಮಾರು 1.5 ಲಕ್ಷ ಮಹಿಳೆಯರು ಮಹಾರಾಜ ಕಾಲೇಜು ಮೈದಾನದಲ್ಲಿ ಭಾಗಿಯಾಗುವುದರೊಂದಿಗೆ, ಐತಿಹಾಸಿಕ ಕಾರ್ಯಕ್ರಮ ಆಗಲಿದೆ. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈಗಾಗಲೇ ಶೇ.80 ರಷ್ಟು ನೋಂದಣಿ ಪ್ರಕ್ರಿಯೆ ಮುಗಿದಿದೆ. ನೋಂದಣಿಗೆ ಸಮಯ ನಿಗದಿ ಮಾಡಿರುವುದಿಲ್ಲ. ನೋಂದಣಿ ನಿರಂತರವಾಗಿರುತ್ತದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ ಹೆಚ್ ಸಿ ಮಹಾದೇವಪ್ಪ ಮಾತನಾಡಿ, ರಾಜ್ಯದ 130 ಲಕ್ಷ ಕುಟುಂಬಗಳು ಸ್ವಾವಲಂಬಿ ಜೀವನ ನಡೆಸಲು ಇದೊಂದು ಉತ್ತಮ ಯೋಜನೆಯಾಗಿದ್ದು, ಸ್ವಾತಂತ್ರ್ಯಾ ನಂತರದ ಬಹುದೊಡ್ಡ ಯೋಜನೆಯಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಸಹಾಯಕವಾಗುವ ಯೋಜನೆ ಈ ಗೃಹ ಲಕ್ಷ್ಮಿ ಯೋಜನೆಯಾಗಿದೆ. ಮೊದಲು ಬೆಳಗಾವಿಯಲ್ಲಿ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಬದಲಾಗಿ ಮೈಸೂರಿನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಮಹಾರಾಜ ಕಾಲೇಜಿನ ಮೈದಾನದಲ್ಲಿ ಗೃಹ ಲಕ್ಷ್ಮಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವ ವಹಿಸಲಿದ್ದಾರೆ. ಅವರಿಗೆ ನಾವೆಲ್ಲ ಬೆನ್ನೆಲುಬಾಗಿ ನಿಂತು ಕೆಲಸ ಮಾಡೋಣ ಎಂದರು.

ಸಭೆಯಲ್ಲಿ ಶಾಸಕರಾದ ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಪ್ರಕಾಶ್, ನಿರ್ದೇಶಕರಾದ ಅರ್ಚನ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.