ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಘೋಷಣೆಗಳಲ್ಲೊಂದಾಗಿರುವ ಗೃಹ ಲಕ್ಷ್ಮೀ ಯೋಜನೆಗೆ ಇಂದು ಚಾಲನೆ ದೊರೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವರಾದಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ರಾಜೀವ್ ಚಂದ್ರಶೇಖರ್ ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಂಜೂರಾತಿ ಆದೇಶ ಹಂಚಿಕೆ ಮಾಡಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನಾವರಣಗೊಳಿಸಲಿದ್ದಾರೆ. ಇಂದಿನಿಂದ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಸಂಪೂರ್ಣ ಉಚಿತವಾಗಿರಲಿದೆ.
[vc_row][vc_column]
BREAKING NEWS
- ‘ನೈತಿಕ ದಿವಾಳಿತನದ ಸಾರಾಯಿ ಗ್ಯಾರೆಂಟಿ ಸರ್ಕಾರ’ – ಬೊಮ್ಮಾಯಿ ಕಿಡಿ
- ‘ಸಂಪುಟ ಸಭೆಯಲ್ಲಿ ಮೋಡ ಬಿತ್ತನೆಗೆ ಚರ್ಚೆ’: ಡಿಸಿಎಂ ಡಿ.ಕೆ.ಶಿವಕುಮಾರ್
- ನಿಯಮ ಉಲ್ಲಂಘನೆ ಮಾಡಿಯೂ ಟ್ರಾಫಿಕ್ ಪೊಲೀಸರಿಗೆ ಯುವತಿಯಿಂದ ಅವಾಜ್!
- ‘ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿದೆ’- ಸಿದ್ದರಾಮಯ್ಯ
- ಭಾರತೀಯ ವಾಯುಪಡೆಗೆ C-295 ಸರಕು ವಿಮಾನ ಸೇರ್ಪಡೆ
- ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಾಘಾತದಿಂದ ಸಾವು
- ‘ಶಾಂತಿಯುತ ಹೋರಾಟಕ್ಕೆ ಸರ್ಕಾರ ಅಡಚಣೆ ಮಾಡಲ್ಲ’: ಡಿಕೆಶಿ
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”
- ‘ನನ್ನ ವಿರುದ್ಧ ಹೈದರ್ಬಾದ್ನಲ್ಲಿ ಸ್ಪರ್ಧಿಸಿ ‘- ರಾಹುಲ್ಗೆ ಓವೈಸಿ ಸವಾಲು