ನವದೆಹಲಿ: ಗೋವು ಮತ್ತು ಅದರ ಸಂತತಿಯ ಹತ್ಯೆಯನ್ನು ಸಂಪೂರ್ಣ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಈ ವಿಚಾರದಲ್ಲಿ ಸಂಬಂಧಿತ ರಾಜ್ಯ ಸರ್ಕಾರವನ್ನು ಸಂಪರ್ಕಿಸಬಹುದು ಎಂದು ಹೇಳಿದೆ. ಬೃಷ್ಭನ್ ವರ್ಮಾ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ಅವರ ನೇತೃತ್ವದ ಪೀಠವು, ರಾಷ್ಟ್ರ ರಾಜಧಾನಿಯಲ್ಲಿ ಗೋಹತ್ಯೆಗೆ ನಿಷೇಧ ಹೇರಿರುವ ಕಾನೂನು ಅನ್ನು ಇಲ್ಲಿನ ಸರ್ಕಾರವು ಜಾರಿಗೆ ತಂದಿದೆ ಎಂಬುದರತ್ತ ಗಮನ ಸೆಳೆಯಿತು. ಇತರ ರಾಜ್ಯಗಳಿಗೆ ಸಂಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲು ಅರ್ಜಿದಾರರಿಗೆ ಸ್ವಾತಂತ್ರ್ಯ ಇದೆ. ನಿರ್ದಿಷ್ಟ ಕಾನೂನು ಜಾರಿಗೆ ತರುವಂತೆ ಶಾಸಕಾಂಗಕ್ಕೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಸಂಜೀವ್ ನರುಲಾ ಅವರೂ ಇದ್ದ ಪೀಠ ಹೇಳಿದೆ. ‘ಇಂಥ ತೀರ್ಮಾನಗಳನ್ನು ಶಾಸಕಾಂಗ ಮಾತ್ರ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್, ನಿರ್ದಿಷ್ಟ ಕಾನೂನು ರೂಪಿಸಲು ಶಾಸಕಾಂಗವನ್ನು ಒತ್ತಾಯಿಸಲು ಸಾಧ್ಯವಿಲ್ಲವೆಂದು ಹೇಳಿದೆ. ದೆಹಲಿ ಸರ್ಕಾರದ ಪರವಾಗಿ ಹಾಜರಾಗಿದ್ದ ವಕೀಲ ಸಂತೋಷ್ ಕುಮಾರ್ ತ್ರಿಪಾಠಿ, ರಾಷ್ಟ್ರ ರಾಜಧಾನಿಯಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧ ಕಾನೂನು ಜಾರಿಯಲ್ಲಿದೆ ಎಂದು ಸ್ಪಷ್ಟಪಡಿಸಿದರು.
[vc_row][vc_column]
BREAKING NEWS
- ಕೇರಳದಲ್ಲಿ ನಿಫಾ ವೈರಸ್ ನಿಯಂತ್ರಣ – ನಿರ್ಬಂಧ ಸಡಿಲ
- ಕೆಎಸ್ಒಯು ಪ್ರಶ್ನೆಪತ್ರಿಕೆ ಲೀಕ್ – ಮಂಗಳೂರು ಕೇಂದ್ರದ ಸಿಬ್ಬಂದಿಯಿಂದ ಕೃತ್ಯ?
- ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಜಮ್ಮು ಕಾಶ್ಮೀರದ ಡೆಪ್ಯುಟಿ ಎಸ್ಪಿ ಅರೆಸ್ಟ್
- ಕೆಲಸ ತೊರೆದ ಮಹಿಳೆ 8 ಸಾವಿರ ಕೋಟಿ ರೂ. ಮೌಲ್ಯದ ಕಂಪನಿಯ ಕಟ್ಟಿ ಬೆಳೆಸಿದರು
- ಸ್ಲೀಪ್ ಮೋಡ್ ನಿಂದ ಎಚ್ಚರವಾಗುತ್ತಾ ವಿಕ್ರಂ, ಪ್ರಗ್ಯಾನ್?
- ಭಾರತ ಕೊಟ್ಟ ಅಧ್ಯಕ್ಷೀಯ ಸೂಟ್ ನಿರಾಕರಿಸಿದ್ದ ಜಸ್ಟಿನ್ ಟ್ರುಡೋ
- ಟಿವಿ ವಾಹಿನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ದೇಶನ
- ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ 19 ವರ್ಷದ ಆಂಟಿಮ್ ಪಂಗಲ್
- ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!
- ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್.! ಈ ಮಾನದಂಡಗಳು ಇಲ್ಲ.!