Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಗ್ರಾಮ ಪಂಚಾಯತಿ ಗ್ರಂಥಪಾಲಕರಿಗೆ ಕನಿಷ್ಠ ವೇತನ ನಿಗದಿ ಪಡಿಸಿದ ರಾಜ್ಯ ಸರ್ಕಾರ..!

0
ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ, ಅವರ ಮಾಸಿಕ ವೇತನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕಳೆದ ಜುಲೈ 27ರಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಗ್ರಂಥಪಾಲಕರ ಸಂಘದ ಪ್ರತಿನಿಧಿಗಳು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ತಮ್ಮ ಹಲವಾರು ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದರು, ಈ ಬೇಡಿಕೆಗಳಲ್ಲಿ ಪ್ರಮುಖವಾಗಿ ವೇತನ ಪರಿಷ್ಕರಣೆಯ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.

ಸಮಾಜದ ಪ್ರಜ್ಞಾವಂತಿಕೆ ಹಾಗೂ ಗ್ರಾಮೀಣ ಯುವಜನರ ಉಜ್ವಲ ಭವಿಷ್ಯದ ಅವಕಾಶಕ್ಕೆ ಸಹಾಯಕವಾಗಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳು “ಅರಿವು ಕೇಂದ್ರ” ಗಳಾಗಿ ಕಾರ್ಯ ನಿರ್ವಹಿಸಲು ಗ್ರಂಥಪಾಲಕರ ಕೆಲಸದ ಸಮಯವನ್ನು ಹೆಚ್ಚಿಸಿ, ಹೆಚ್ಚಿದ ಗಂಟೆಗಳು ಹಾಗೂ ವಿಭಜಿತ ಸಮಯವನ್ನು ಗಮನದಲ್ಲಿರಿಸಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಕನಿಷ್ಠ ಮಾಸಿಕ ಮೂಲ ವೇತನವನ್ನು ನಿಗದಿಪಡಿಸಿ ಜೊತೆಗೆ ಕಾರ್ಮಿಕ ಇಲಾಖೆ ಕಾಲಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ಪಾವತಿಸುವಂತೆ ಮಹತ್ವಾಕಾಂಕ್ಷಿ ಆದೇಶವನ್ನು ಹೊರಡಿಸಿದೆ.

ಬಸವಣ್ಣನವರ ‘ಅರಿವೇ ಗುರು’ ತತ್ವದ ಆಶಯದಂತೆ ಗ್ರಂಥಾಲಯಗಳನ್ನು ‘ಅರಿವು ಕೇಂದ್ರ’ಗಳನ್ನಾಗಿ ಮಾರ್ಪಡಿಸಿ ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಗ್ರಾಮೀಣ ವಿಶ್ವವಿದ್ಯಾಲಯಗಳಂತೆ ರೂಪಿಸಲು ಈ ಮಹತ್ವಾಕಾಂಕ್ಷಿ ಹೆಜ್ಜೆ ಇರಿಸಲಾಗಿದೆ.

ಸಮೃದ್ಧ ಸಮಾಜ ನಿರ್ಮಿಸಲು, ಸ್ಥಿರ ಸಮಾಜದ ಅಗತ್ಯವಿದೆ. ಸ್ಥಿರ ಸಮಾಜ ನಿರ್ಮಾಣವಾಗಲು ಪ್ರಬುದ್ಧ ಸಮಾಜದ ಅಗತ್ಯವಿದೆ. ನಾಡಿನ ಗ್ರಂಥಾಲಯ ಹಾಗೂ ಇವುಗಳನ್ನು ಪೂರ್ಣಬಳಕೆಗೆ ಸನ್ನದ್ಧಗೊಳಿಸುವ ಗ್ರಂಥಪಾಲಕರನ್ನು ಸಬಲೀಕರಣಗೊಳಿಸಲು ಹೊರಡಿಸಲಾಗಿರುವ ಈ ಆದೇಶ ಪ್ರಬುದ್ಧ ಸಮಾಜದ ನಿರ್ಮಾಣಕ್ಕೆ ನಮ್ಮ ಸರ್ಕಾರದ ಬದ್ಧತೆಯ ಪ್ರತೀಕವಾಗಿದೆ.

ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಮಾಸಿಕ ಗೌರವಧನವನ್ನು ರೂ. 7,000/- ಗಳಿಂದ ರೂ.12,000/- ಗಳಿಗೆ ಹೆಚ್ಚಿಸಿ ಆದೇಶಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್‌ (ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಸೇವಾ) ನಿಯಮಗಳು, 2022 ರನ್ನು ರೂಪಿಸಲಾಗಿದೆ. ಸದರಿ ನಿಯಮಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ವಿಧಾನ ಮತ್ತು ಸೇವಾ ಷರತ್ತುಗಳನ್ನು ನಿರ್ಧಿಷ್ಟಡಿಸಲಾಗಿದೆ.

2023-24 ನೇ ಸಾಲಿನ ಜುಲೈ ತಿಂಗಳ ಆಯವ್ಯಯ ಭಾಷಣದ ಕಂಡಿಕೆ 206 ರಲ್ಲಿ ಗಾಮ ಪಂಚಾಯಿತಿ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳು” ಎಂದು ಮೇಲೆ ರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗು ನರಿಗೆ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯಗಳನ್ನು ನೀಡಲಾಗುವುದು, ಜೊತೆಗೆ ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ವಾರಂಶದಲ್ಲಿಯೂ ತೆಗೆಯಲಾಗುವುದು ಎಂದು ಘೋಷಿಸಲಾಗಿರುತ್ತದೆ.

Leave A Reply

Your email address will not be published.