Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಚಿಕ್ಕಮಗಳೂರು: ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ

0

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ.

ಮೃತ ಯುವಕ ನನ್ನು ವರುಣ್(28) ಎಂದು ಗುರುತಿಸಲಾಗಿದೆ.

ತರೀಕೆರೆ ಶಾಸಕ ಶ್ರೀನಿವಾಸ್ ಅವರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಆರ್ಕೇಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರಕ್ಕೆ ಕಬಾಬ್ ಮೂರ್ತಿ ಹಾಗೂ ವರುಣ್ ಎಂಬುವವರ ಮಧ್ಯೆ ಗಲಾಟೆಯಾಗಿದೆ.

ಭೀಕರ ರೈಲು ದುರಂತ: ಮೃತರ ಕುಟುಂಬಕ್ಕೆ ಹಲವು ರಾಷ್ಟ್ರಗಳ ನಾಯಕರ ಸಂತಾಪ

ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ ವರುಣ್​ಗೆ ಡ್ರ್ಯಾಗರ್​ನಿಂದ ಇರಿದಿದ್ದಾನೆ.

ಘಟನೆಯಲ್ಲಿ ಮಂಜು ಹಾಗೂ ಸಂಜು ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply

Your email address will not be published.