ಚಿತ್ರದುರ್ಗ: ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಆಯಿಲ್ ತುಂಬಿದ್ದ ಕಂಟೇನರ್ ಲಾರಿ ರಸ್ತೆ ಮಧ್ಯೆ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಲಾರಿಯ ಚಾಲಕ ಮತ್ತು ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗದ NH 48ರ ನವೀನ್ ಐಶ್ವರ್ಯ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಬೆಂಗಳೂರಿಂದ ಬಳ್ಳಾರಿ ಕಡೆಗೆ ತೆರಳುತ್ತಿದ್ದ ಆಯಿಲ್ ತುಂಬಿದ್ದ ಕಂಟೇನರ್ ಲಾರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದದೆ. ತಕ್ಷಣವೇ ಲಾರಿಯಿಂದ ಚಾಲಕ ಹಾಗೂ ಕ್ಲೀನರ್ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.