ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ತುರ್ತು ಅರ್ಜಿ ವಿಚಾರಣೆ ನಡೆಸುವಂತೆಯೂ ನ್ಯಾಯಾಲಯಕ್ಕೆ ನಳೀನ್ ಕಟೀಲ್ ಪರ ವಕೀಲರು ಮನವಿ ಮಾಡಿದ್ದಾರೆ.