Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಿ ಸತ್ಯ ಹೊರಬರಬೇಕು- ಸಿಟಿ ರವಿ..!

0

ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕಾದರೆ, ಸಮಗ್ರ ತನಿಖೆ ಆಗಬೇಕು ಎಂದು ಬಿಜೆಪಿ ನಾಯಕ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.

ಮಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕಾದರೆ, ಸಮಗ್ರ ತನಿಖೆ ಆಗಬೇಕು ಎಂದು ಬಿಜೆಪಿ ನಾಯಕ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.

ಹಣವೇ ಬಿಜೆಪಿಯಲ್ಲಿ ಪ್ರಧಾನ ಆಲ್ಲ ಒಂದು ವೇಳೆ ಹಾಗಿದ್ದರೆ ನೂರಾರು ಗ್ರಾಮೀಣ ಭಾಗದ ಬಡ ಕಾರ್ಯಕರ್ತರು ಸಂಸದರು, ಶಾಸಕರು ಆಗುತ್ತಿರಲಿಲ್ಲ ಎಂದು ಬಿಜೆಪಿ ನಾಯಕ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಬೈಂದೂರು ಬಿಜೆಪಿ ಟಿಕೆಟ್​​ಗಾಗಿ ಚೈತ್ರಾ ಕುಂದಾಪುರ ಡೀಲ್ ಪ್ರಕರಣ ಕುರಿತು ಮಾತನಾಡಿದರು.

ಬಿಜೆಪಿಯಲ್ಲಿ ಹಣವೇ ಪ್ರಧಾನವಾಗಿದ್ದರೆ ಬೈಂದೂರಿನ ಟಿಕೆಟ್ ಬಡ ಕಾರ್ಯಕರ್ತ ಗುರುರಾಜ್ ಶೆಟ್ಟಿ ಗಂಟಿಹೊಳೆ, ಸುಳ್ಯದ ಟಿಕೆಟ್ ಬಡ ಮಹಿಳೆ ಭಾಗೀರಥಿ ಮುರುಳ್ಯ ಅವರಿಗೆ ಸಿಗುತ್ತಿರಲಿಲ್ಲ.

ಕೋಟಾ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಅವರು ನಾಯಕರಾಗುತ್ತಿರಲಿಲ್ಲ ಎಂದರು.

ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ದಕ್ಷಿಣ ಕನ್ನಡ ಮತ್ತು ಉಡುಪಿಯಂಥ ಬುದ್ದಿವಂತರ ಜಿಲ್ಲೆಯವರಾಗಿ ಮೋಸ ಹೋಗಿದ್ದಾರೆ.

ನೇರವಾಗಿ ಫೋನ್ ಮಾಡಿದರೂ ಬಿಜೆಪಿ ನಾಯಕರು ಸಂಪರ್ಕಕ್ಕೆ ಸಿಗುತ್ತಿದ್ದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯೇ ಅವರ ಜೊತೆ ತುಳು ಭಾಷೆಯಲ್ಲೇ ಮಾತಾಡುತ್ತಿದ್ದರು.

ನಳಿನ್ ಕುಮಾರ್ ಕಟೀಲ್, ಕೋಟಾ ಶ್ರೀನಿವಾಸ ಪೂಜಾರಿಯೂ ಮಾತಾಡುತ್ತಿದ್ದರು ಎಂದರು. ಅವರ ಬಳಿಯೇ ನೇರ ಫೋನ್ ಮಾಡಿ ಮಾತನಾಡುವ ಅವಕಾಶ ಗೋವಿಂದ ಬಾಬು ಪೂಜಾರಿಗೆ ಇತ್ತು.

ಈ ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕು, ಸಮಗ್ರ ತನಿಖೆ ಆಗಬೇಕು. ಯಾರೇ ಇದ್ದರೂ ಸೂಕ್ತ ತನಿಖೆ ನಡೆದು ಕ್ರಮ ಆಗಲಿ ಎಂದರು.
ಜೆಡಿಎಸ್ – ಬಿಜಿಪಿ ಮೈತ್ರಿ ಬಗ್ಗೆ ಮಾತನಾಡಿದ ನಾವು ಪರಿಷತ್ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ಆಗುತ್ತಿದೆ, ಆದರೆ ಅಂತಿಮ ಆಗಿಲ್ಲ. ಅದನ್ನು ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.

ಬಿಜೆಪಿಯ ಮಾಜಿ ಕಾರ್ಪೋರೆಟರ್​ಗಳು, ಸದಸ್ಯರು ಕಾಂಗ್ರೆಸ್ ಸೇರಿದ್ದಾರೆ. ಬೆಲ್ಲ ಇದ್ದ ಕಡೆ ಇರುವೆ ಹೋಗುವುದು ಸ್ವಾಭಾವಿಕ. ಕೆಲವರು ಅಧಿಕಾರದ ಕಾರಣಕ್ಕೆ ಇಲ್ಲಿಂದ ಅಲ್ಲಿಗೆ ಹೋಗಿದ್ದಾರೆ.

ನಾವು ಸಚಿವರು, ಶಾಸಕರನ್ನೇ ಕರೆದುಕೊಂಡು ಹೋದರೂ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಈಗ ಅವರು ಕಾರ್ಪೋರೆಟರ್​ಗಳನ್ನು ಕರೆದುಕೊಂಡು ಏನಾಗುತ್ತದೆ ಎಂದರು.

ಈಗ ಅವರು ಅಪರೇಷನ್ ಹಸ್ತ ಮಾಡಲಿ, ಮುಂದೆ ಜನರೇ ಹಸ್ತವನ್ನು ಅಪರೇಷನ್ ಮಾಡುತ್ತಾರೆ. ಅಧಿಕಾರದ ಆಸೆಗೆ ಯಾರು‌ ಎಲ್ಲೇ ಹೋದರೂ ಅಧಿಕಾರ ಉಳಿಸಿಕೊಳ್ಳಲು ಆಗಲ್ಲ.

ನನ್ನ ಸೋಲಿಗೆ ನಾನೇ ಕಾರಣ, ಬೇರೆ ಯಾರಿಗೂ ದೂರಲ್ಲ. ನನ್ನ ದುರ್ಬಲತೆಯೇ ಕಾರಣ, ಅತೀ ಹೆಚ್ಚು ವೋಟ್ ಪಡೆದರೂ ಸೋತಿದ್ದೇನೆ ಎಂದರು.

Leave A Reply

Your email address will not be published.