Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಜಗತ್ತನ್ನೇ ತಲ್ಲಣಗೊಳಿಸಿದ್ದ ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 13 ವರ್ಷ

0

ಜಗತ್ತನ್ನೇ ತಲ್ಲಣಗೊಳಿಸಿದ್ದ ಮಂಗಳೂರು ಏರ್‌ ಪೋರ್ಟ್‌ ನಲ್ಲಿ ನಡೆದ ವಿಮಾನ ದುರಂತಕ್ಕೆ ಇಂದಿಗೆ 13 ವರ್ಷ. 2010ರ ಮೇ 22ರಂದು ಈ ಭೀಕರ ದುರಂತ ಸಂಭವಿಸಿದ್ದು, ವಿಮಾನದಲ್ಲಿದ್ದ 158 ಮಂದಿ ಮೃತಪಟ್ಟು ಕೇವಲ 8 ಮಂದಿ ಮಾತ್ರ ಬದುಕಿ ಉಳಿದಿದ್ದರು.

ದುರಂತದಲ್ಲಿ ಮೃತಪಟ್ಟವರಲ್ಲಿ ಅನೇಕರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ಸಂಸ್ಕಾರ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ನಿರ್ಮಿಸಲಾಗಿದೆ. ಮೇ 22ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ಅಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.

2010ರ ಮೇ 22ರಂದು ಬೆಳಗ್ಗೆ 6.20ರ ಸಮಯ. ದುಬೈನಿಂದ ಮಂಗಳೂರು ಏರ್‌ ಪೋರ್ಟ್ ಆಗಮಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಲ್ಯಾಂಡಿಂಗ್‌ ವೇಳೆ ನಿಯಂತ್ರಣಕ್ಕೆ ಸಿಗದೆ ಕೆಂಜಾರಿನ ಗುಡ್ಡದಿಂದ ಕೆಳಜಾರಿ ಅಪಘಾತಕ್ಕೀಡಾಗಿತ್ತು. ಕೂಡಲೆ ವಿಮಾನ ಪೂರ್ತಿ ಅಗ್ನಿ ಆವರಿಸಿದ್ದು, ಅದರಲ್ಲಿದ್ದ 158 ಮಂದಿ ಸಜೀವ ದಹನವಾಗಿದ್ದರು. ಕೇವಲ 8 ಮಂದಿಯಷ್ಟೇ ಬದುಕಿ ಉಳಿದಿದ್ದರು. ನಸುಕಿನ ನಿದ್ರೆಯಲ್ಲಿದ್ದವರು ಕ್ಷಣ ಮಾತ್ರದಲ್ಲಿ ಸುಟ್ಟು ಕರಕಲಾಗಿದ್ದರು.

ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಒದಗಿಸುವುದಕ್ಕಾಗಿ ಕಂಪೆನಿಯು ಮುಂಬೈನ ಕಾನೂನು ತಜ್ಞ ಎಚ್‌.ಡಿ. ನಾನಾವತಿ ನೇತೃತ್ವದ ಸಂಸ್ಥೆಯನ್ನು ನೇಮಿಸಿತ್ತು. ಈ ಸಂಸ್ಥೆ ಸುಮಾರು 147 ಕುಟುಂಬಗಳಿಗೆ ಪರಿಹಾರ ಒದಗಿಸಿರುವುದಾಗಿ ಹೇಳಿಕೊಂಡಿತ್ತು. ಇದರಲ್ಲಿ ಗರಿಷ್ಠ ಎಂದರೆ 7.7 ಕೋಟಿ ರು. ಪಡೆದವರೂ ಇದ್ದರು. ಆದರೆ ಪರಿಹಾರದ ಮೊತ್ತದ ಬಗ್ಗೆ ಅನೇಕ ಕುಟುಂಬದವರು ಆಕ್ಷೇಪವೆತ್ತಿದ್ದರು. ಇನ್ನೂ ಸುಮಾರು 45 ಕುಟುಂಬದವರು ಕಾನೂನು ಹೋರಾಟದಲ್ಲಿದ್ದಾರೆ. ಈ ನಡುವೆ ಏರ್‌ ಇಂಡಿಯಾವನ್ನು ಟಾಟಾ ಸಮೂಹ ಸಂಸ್ಥೆ ಖರೀದಿಸಿದೆ.

Leave A Reply

Your email address will not be published.