ನವದೆಹಲಿ : ಜಗತ್ತಿನಲ್ಲೇ ಭಾರತವು ಅತಿದೊಡ್ಡ ರಸ್ತೆ ಜಾಲವನ್ನು ಹೊಂದಿರುವ ಎರಡನೇ ದೇಶವಾಗಿದೆ. ಈ ವಿಷಯದಲ್ಲಿ ಚೀನಾವನ್ನು ಹಿಂದಿಕ್ಕಿ ಭಾರತವು ಎರಡನೇ ಸ್ಥಾನಕ್ಕೇರಿದೆ. ಮೊದಲನೇ ಸ್ಥಾನದಲ್ಲಿ ಅಮೆರಿಕವಿದೆ. 8 ವರ್ಷಗಳಲ್ಲಿ 1.45 ಲಕ್ಷ ಕಿಮೀ ರಸ್ತೆ ಸಂಪರ್ಕವನ್ನು ವಿಸ್ತರಿಸುವ ಮೂಲಕ ಭಾರತವು ಎರನಡೇ ಸ್ಥಾನಕ್ಕೆ ಏರಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿನ ಸಾಧನೆಗಳನ್ನು ಹಂಚಿಕೊಂಡರು. ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಹೆದ್ದಾರಿಗಳನ್ನು ಸುಧಾರಿಸಲು ಮತ್ತು ಗ್ರೀನ್ಫೀಲ್ಡ್ ಎಕ್ಸ್ಪ್ರೆಸ್ವೇಗಳನ್ನು ರಚಿಸುವತ್ತ ಗಮನಹರಿಸುತ್ತಿದೆ. ದೇಶದ ಮೂಲಸೌಕರ್ಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದಿಲ್ಲಿ-ಮುಂಬೈ ಎಕ್ಸ್ಪ್ರೆಸ್ ವೇ ಮೇಲೆ ಸಂಪೂರ್ಣ ಗಮನವನ್ನು ಕೇಂದ್ರೀಕರಿಸಿದೆ. ಈ ಎಕ್ಸ್ಪ್ರೆಸ್ ವೇ ಭಾರತದ ಉನ್ನತ ದರ್ಜೆಯ ಯೋಜನೆಯಾಗಿದ್ದು, ಬಹುತೇಕ ಪೂರ್ಣಗೊಳಿಸಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.
[vc_row][vc_column]
BREAKING NEWS
- ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಲೆಕ್ಕಾಚಾರದ ತಂತ್ರಗಳು ಕೆಲಸ ಮಾಡುವುದಿಲ್ಲ’- ಬಿಎಸ್ವೈ
- ಬೆಳಗಾವಿ : ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ಎ ಗಳ ಸೇವೆ ಮಾಡ್ತಿದ್ದಾರೆ – ವಿಪಕ್ಷ ನಾಯಕ ಆರ್ ಅಶೋಕ ಕಿಡಿ
- 10 ಮಂದಿ ಬಿಜೆಪಿ ಸಂಸದರು ಸಂಸತ್ ಸ್ಥಾನಗಳಿಗೆ ರಾಜೀನಾಮೆ
- ಸರಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ
- ಉಧಂಪುರ ದಾಳಿ ಸಂಚುಕೋರ, 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸಹಾಯಕ ಪಾಕ್ನಲ್ಲಿ ಹತ್ಯೆ
- ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್
- ‘ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ’- ಹೆಚ್ಡಿಕೆಗೆ ದಿನೇಶ್ ಗುಂಡೂರಾವ್ ಟಾಂಗ್
- ಕೊಳವೆ ಬಾವಿಗೆ ಬಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು
- ಗುರಿ ತಪ್ಪಿದ ಸೇನಾ ಡ್ರೋನ್ ದಾಳಿ; 85 ಮಂದಿ ನಾಗರಿಕರು ಮೃತ್ಯು
- ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಿ ಕಾಣಿಸುತ್ತದೆ – ಏಮ್ಸ್ ವರದಿ