Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಜನರಿಗೆ ವಿದ್ಯುತ್ ದುರ್ಬಳಕೆ-ದುರುಪಯೋಗ ಮಾಡುವಂತೆ ಬಿಜೆಪಿ ಕುಮ್ಮಕ್ಕು ಕೊಡುತ್ತಿದೆ: ಸಿದ್ದರಾಮಯ್ಯ

0

ಬೆಂಗಳೂರು: ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ-ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2023 ಉದ್ಘಾಟಿಸಿದ ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ.

ಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ: ಹಳಿ ತಪ್ಪಿದ 5 ಬೋಗಿಗಳು

ಆದರೆ ಬಿಜೆಪಿ, ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ-ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ನಾವು ಅಗತ್ಯಕ್ಕೆ ತಕ್ಕಂತೆ ಬಳಸಲು ನಾಡಿನ ಜನತೆಗೆ ನೆರವಾಗುತ್ತೇವೆ. ನೀರು, ಗಾಳಿ, ವಿದ್ಯುತ್ ಯಾವುದನ್ನೂ ದುಂದುವೆಚ್ಚ ಮಾಡಬಾರದು. ದುಂದುವೆಚ್ಚ ಎನ್ನುವುದು ಪ್ರಕೃತಿ ವಿರೋಧಿ, ಜನ ವಿರೋಧಿ ಮತ್ತು ಪರಿಸರ ವಿರೋಧಿಯಾದದ್ದು ಎಂದು ಹೇಳಿದರು.

ಪರಿಸರ ಉಳಿಸುವುದು, ಕಾಡು ಬೆಳೆಸುವುದು ಮತ್ತು ಉಳಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಪ್ರತಿಯೊಬ್ಬರ ಜವಾಬ್ದಾರಿ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪ್ರಕೃತಿ ಉಳಿಸುವ ಜವಾಬ್ದಾರಿ ಇದೆ. ಮನುಷ್ಯ ಪ್ರಕೃತಿಕ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

 

Leave A Reply

Your email address will not be published.