ದಕ್ಷಿಣ ಕನ್ನಡ: ಕಂಬಳಕ್ಕೆ ಅವಕಾಶ ಕಲ್ಪಿಸಿ ಕರ್ನಾಟಕ ಮಾಡಿರುವ ತಿದ್ದುಪಡಿಯನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಜಿಲ್ಲಾ ಕಂಬಳ ಸಮಿತಿ ಸ್ವಾಗತಿಸಿದೆ.
ಕರ್ನಾಟಕದ ಕರಾವಳಿ ಭಾಗದ ಕಂಬಳ, ಮಹಾರಾಷ್ಟ್ರದ ಚಕ್ಕಡಿ ಸ್ಪರ್ಧೆ ಮತ್ತು ತಮಿಳುನಾಡಿನ ಜಲ್ಲಿಕಟ್ಟು ಕ್ರೀಡೆಗಳಿಗೆ ಸುಪ್ರೀಂ ಹಸಿರು ನಿಶಾನೆ ನೀಡಿದೆ. ಜಲ್ಲಿಕಟ್ಟು, ಎತ್ತಿನಗಾಡಿ ಓಟ ಮತ್ತು ಕಂಬಳಕ್ಕೆ ಅವಕಾಶ ಕಲ್ಪಿಸುವ 1960ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಪಿಸಿಎ) ಕಾಯ್ದೆ 1960ಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಶಾಸಕರು ಮಾಡಿದ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್‌ನ ಐವರು ಸದಸ್ಯರ ಪೀಠವು ಗುರುವಾರ ಎತ್ತಿ ಹಿಡಿದಿದೆ.