ದಾವಣಗೆರೆ: ಶಿಕ್ಷಣ ತಜ್ಞ, ಜಾನಪದ ವಿದ್ವಾಂಸ, ಇಲ್ಲಿನ ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಎಂ.ಜಿ. ಈಶ್ವರಪ್ಪ (74) ಬೆಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ (ಜೂ.01) ಸಂಜೆ ನಿಧನರಾದರು.
ಎರಡು ವಾರಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಜೂನ್ 2ರಂದು ಭಾನುವಾರ ಮಧ್ಯಾಹ್ನ 2ಕ್ಕೆ ದಾವಣಗೆರೆಯ ಶಾಮನೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


































