ರಾಂಚಿ: ಚಂಪೈ ಸೊರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜಾರ್ಖಂಡ್ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ಜೆಎಂಎಂ ಅಧ್ಯಕ್ಷ ಹೇಮಂತ್ ಸೊರೆನ್ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದರು. ಜುಲೈ 7ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಜಾಮೀನಿನ ಬಳಿಕ ಬಿರ್ಸಾ ಮುಂಡಾ ಜೈಲಿನಿಂದ ಬಿಡುಗಡೆಯಾಗಿರುವ ಹೇಮಂತ್ ಸೊರೇನ್ ಮತ್ತೆ ಅಧಿಕಾರ ಸ್ವೀಕರಿಸಲಿದ್ದಾರೆ. ಐದು ತಿಂಗಳ ಅಧಿಕಾರದ ನಂತರ ಚಂಪೈ ಸೊರೆನ್ ಕೆಳಗಿಳಿದರು.

 
				 
         
         
         
															 
                     
                    

































 
    
    
        