Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಜು.21ಕ್ಕೆ ರಾಹುಲ್ ಗಾಂಧಿ ಮೇಲ್ಮನವಿ ವಿಚಾರಣೆ: ಸುಪ್ರೀಂ ಕೋರ್ಟ್ ಸಮ್ಮತಿ

0

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡುವಂತೆ ನಿರಾಕರಿಸಿದ ಗುಜರಾತ್ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

ರಾಹುಲ್ ಗಾಂಧಿ ಪರ ವಕೀಲರು ಸಲ್ಲಿಸಿದ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ , ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಜು. 21 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ 2019ರಲ್ಲಿ ಕೋಲಾರದಲ್ಲಿ ನಡೆಸಿದ ಚುನಾವಣಾ ಭಾಷಣವೊಂದರಲ್ಲಿ ರಾಹುಲ್ ಗಾಂಧಿ ಅವರು, ಮೋದಿ ಉಪನಾಮ ಹೊಂದಿರುವವರೆಲ್ಲ ಕಳ್ಳರೇ ಆಗಿರುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ ಎಂದು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಭಾರತೀಯ ಸೇನೆ ಕುರಿತು ISIಗೆ ಮಾಹಿತಿ ನೀಡುತ್ತಿದ್ದ ವ್ಯಕ್ತಿಯ ಬಂಧನ..!

ಕ್ರಿಮಿನಲ್ ಮಾನಹಾನಿ ಪ್ರಕರಣದಡಿಯಲ್ಲಿ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಮೇಲ್ಮನವಿಯನ್ನು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಇದೀಗ ಸಮ್ಮತಿಸಿದೆ.

Leave A Reply

Your email address will not be published.