ನವದೆಹಲಿ: ಜೂನ್ 9 ರ ಸಂಜೆ 6ಗಂಟೆಗೆ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಎನ್‌ಡಿಎ ಸಂಸದರ ಸಭೆ ನಡೆಯಿತು. ಈ ಸಂದರ್ಭ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಹಿಂದೆ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಶನಿವಾರ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಇದೀಗ ಭಾನುವಾರ ಪ್ರಮಾಣ ವಚನ ನಡೆಯಲಿದೆ ಎಂದು ಅಧಿಕೃತವಾಗಿ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಯಾರೆಲ್ಲ ಪ್ರಮಾಣ ವಚನ ನಡೆಸಲಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿದುಬರಬೇಕಿದೆ.