ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೂನ್ 29 ರಂದು ಮಣಿಪುರಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ.
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ವಿರೋಧ ಪಕ್ಷದ ಪ್ರಮುಖ ನಾಯಕನೋರ್ವನ ನೀಡುತ್ತಿವ ಮೊದಲ ಭೇಟಿಯಾಗಿದೆ
ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಪದಚ್ಯುತಗೊಳಿಸುವಂತೆ ಕಾಂಗ್ರೆಸ್ ನಿರಂತರ ಬೇಡಿಕೆಗಳ ನಡುವೆಯೇ ಈ ಭೇಟಿ ಮಹತ್ವ ಪಡೆದಿದೆ.
ರಾಹುಲ್ ಗಾಂಧಿ ಅವರು ಜೂನ್ 29-30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ಮಣಿಪುರ ಭೇಟಿಯ ಸಮಯದಲ್ಲಿ ಇಂಫಾಲ್ ಮತ್ತು ಚುರಚಂದಪುರದ ಪರಿಹಾರ ಶಿಬಿರಗಳಿಗೆ ಭೇಟಿ ನೀಡುತ್ತಾರೆ ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ(ಸಂಘಟನೆ) ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.