ಜೆ.ಪಿ ನಡ್ಡಾ ಅವರ ಪತ್ನಿಗೆ ಸೇರಿದ್ದ ದುಬಾರಿ ಕಾರು ಕಳ್ಳತನ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಪತ್ನಿಗೆ ಸೇರಿದ್ದ ಕಾರು ಕಳ್ಳತನವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗೋವಿಂದಪುರಿ ಪ್ರದೇಶದಿಂದ ಟೊಯೊಟಾ ಫಾರ್ಚೂನರ್ ಕಾರನ್ನು ಕಳ್ಳತನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದೇ ತಿಂಗಳ ಮಾ. 19ರಂದು ಮಧ್ಯಾಹ್ನ ಕಳ್ಳತನ ನಡೆದಿದೆ ಎಂದು ಹೇಳಲಾಗಿದೆ.

ಚಾಲಕ ಜೋಗಿಂದರ್ ಅವರು ಟೊಯೊಟಾ ಫಾರ್ಚುನರ್ ಕಾರನ್ನು ಸರ್ವಿಸ್ ಮಾಡಿದ ನಂತರ ಗೋವಿಂದಪುರಿಗೆ ತಂದು ತಮ್ಮ ಮನೆಯಲ್ಲಿ ನಿಲ್ಲಿಸಿದ್ದರು. ಊಟ ಮಾಡಿ ಬರುವಷ್ಟರಲ್ಲಿ ಕಾರು ಕಳ್ಳತನವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Advertisement

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕದ್ದ ಕಾರು ಗುರುಗ್ರಾಮ್ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ.. ಕಳ್ಳತನವಾದ ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದು, ಕಾರನ್ನು ಶೋಧ ನಡೆಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement