Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಜೈಪುರ್ ಮುಂಬೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಗುಂಡಿನ ದಾಳಿ- ಆರ್‌ಪಿಎಫ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರ ಬಲಿ

0

ಜೈಪುರ : ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ಚಲಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಪೇದೆ ಗುಂಡು ಹಾರಿಸಿದ್ದು, ಆರ್‌ಪಿಎಫ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಜೈಪುರದಿಂದ ಮುಂಬೈಗೆ ರೈಲು ಚಲಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಪೇದೆ ಸಬ್ ಇನ್ಸ್ಪೆಕ್ಟರ್ ಜೊತೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಾನೆ. ಈ ವೇಳೆ ರೈಲಿನಲ್ಲಿದ್ದ ಕೆಲ ಪ್ರಯಾಣಿಕರು ಅವರಿಬ್ಬರ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೇದೆ ಕೋಪಗೊಂಡು ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ವರದಿಗಳು ತಿಳಿಸಿವೆ. ಆರೋಪಿ ಆರ್‌ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಘಟನೆಯ ಬಳಿಕ ರೈಲಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ ಆತನನ್ನು ಪೊಲೀಸರು ಬಂಧಿಸಿದ್ದಾರೆ.

Leave A Reply

Your email address will not be published.