ಲಕ್ನೋ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ನಡೆಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿಗೆ ತೀವ್ರ ಹಿನ್ನಡೆಯಾಗಿದೆ. ಸಮಿತಿಯ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರಿಂದ ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ನಡೆಸಲು ಇದ್ದ ತಡೆ ದೂರಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಜುಲೈ 24ರಂದು ಸಮೀಕ್ಷೆಯನ್ನು ಪ್ರಾರಂಭಿಸಿತ್ತು. ಆದರೆ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿಯು ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅಂದು ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ಕೈಡಲಾಗಿತ್ತು. ಈ ಸಂಬಂಧ ಅಲಹಾಬಾದ್ ಹೈಕೋರ್ಟ್ ಜುಲೈ 27ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು.
[vc_row][vc_column]
BREAKING NEWS
- ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಲೆಕ್ಕಾಚಾರದ ತಂತ್ರಗಳು ಕೆಲಸ ಮಾಡುವುದಿಲ್ಲ’- ಬಿಎಸ್ವೈ
- ಬೆಳಗಾವಿ : ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ಎ ಗಳ ಸೇವೆ ಮಾಡ್ತಿದ್ದಾರೆ – ವಿಪಕ್ಷ ನಾಯಕ ಆರ್ ಅಶೋಕ ಕಿಡಿ
- 10 ಮಂದಿ ಬಿಜೆಪಿ ಸಂಸದರು ಸಂಸತ್ ಸ್ಥಾನಗಳಿಗೆ ರಾಜೀನಾಮೆ
- ಸರಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ
- ಉಧಂಪುರ ದಾಳಿ ಸಂಚುಕೋರ, 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸಹಾಯಕ ಪಾಕ್ನಲ್ಲಿ ಹತ್ಯೆ
- ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್
- ‘ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ’- ಹೆಚ್ಡಿಕೆಗೆ ದಿನೇಶ್ ಗುಂಡೂರಾವ್ ಟಾಂಗ್
- ಕೊಳವೆ ಬಾವಿಗೆ ಬಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು
- ಗುರಿ ತಪ್ಪಿದ ಸೇನಾ ಡ್ರೋನ್ ದಾಳಿ; 85 ಮಂದಿ ನಾಗರಿಕರು ಮೃತ್ಯು
- ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಿ ಕಾಣಿಸುತ್ತದೆ – ಏಮ್ಸ್ ವರದಿ