11 ವರ್ಷದ ಬಾಲಕ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು ಕಾವ್ಯಶ್ರೀ ಎಂಬುವವರ ಮಗ ಸಚಿನ್ ಎಂದು ಗುರುತಿಸಲಾಗಿದೆ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಸಚಿನ್ಗೆ ಶುಕ್ರವಾರ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು.
ಹೀಗಾಗಿ, ಅವನು ಶಾಲೆಗೆ ಹೋಗದೆ ಮನೆಯಲ್ಲಿಯೇ ಟಿವಿ ನೋಡುತ್ತ ಕುಳಿತಿದ್ದ. ಅದೇ ವೇಳೆ ಮತ್ತೇ ನೋವು ಕಾಣಿಸಿಕೊಂಡು ಕುಳಿತಿದ್ದ ಜಾಗದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ































