Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಟ್ರಾನ್ಸ್‌ಫಾರ್ಮರ್ ಸ್ಫೋಟದಿಂದ 15 ಮಂದಿ ಮೃತ್ಯು ಹಲವರಿಗೆ ಗಾಯ

0

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ದಡದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಬಳಿಕ ವಿದ್ಯುತ್ ಸ್ಪರ್ಶದಿಂದ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡ ಭೀಕರ ಘಟನೆ ನಡೆದಿದೆ.

ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ಕುಮಾರ್ ಈ ಘಟನೆ ಬಗ್ಗೆ ಸ್ಪಷ್ಟಪಡಿಸಿದ್ದು, “ಸಾವನ್ನಪ್ಪಿದವರಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಮೂವರು ಗೃಹರಕ್ಷಕರು ಸೇರಿದಂತೆ ಸುಮಾರು 15 ಜನರು ಸಾವನ್ನಪ್ಪಿದ್ದು ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ನಮಾಮಿ ಗಂಗೆ ಯೋಜನೆಯ ಕಾಮಗಾರಿ ವೇಳೆ ಈ ದುರಂತ ನಡೆದಿದೆ ಎಂದು ಹೇಳಲಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave A Reply

Your email address will not be published.