Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಡಿಕೆ ಶಿವಕುಮಾರ್ ರಿಂದ ಅನಧಿಕೃತ ಬ್ಯಾನರ್| ನಿಯಮ ಮೀರಿದ ಸಚಿವರಿಗೇ ದಂಡ ವಿಧಿಸಿದ ಬಿಬಿಎಂಪಿ|

0

ಬೆಂಗಳೂರು ನಗರದಲ್ಲಿ ಅಳವಡಿಸಿರುವ ಅನಧಿಕೃತ ಬ್ಯಾನರ್​​ಗಳಿಗೆ ದಂಡ ವಿಧಿಸುವ ಕಾರ್ಯವನ್ನು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (BBMP) ಮುಂದುವರಿಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಳವಡಿಸಿದ್ದ ಅನಧಿಕೃತ ಬ್ಯಾನರ್ ಮೇಲೆ ದಂಡ 50,000 ರೂ. ದಂಡ ವಿಧಿಸಿದೆ.

ಬೆಂಗಳೂರಿನ ವಸಂತನಗರದ ಮಿಲ್ಲರ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಎದುರು ಬ್ಯಾನರ್ ಹಾಕಲಾಗಿತ್ತು. ಇದಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ದಂಡ ವಿಧಿಸಲಾಗಿದೆ.

ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪದಾಧಿಕಾರಿಗಳು ಒಳಗೊಂಡ ಬ್ಯಾನರ್​​​ಗೆ ದಂಡ ಹಾಕಲಾಗಿದೆ. ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಲಾಗಿತ್ತು.

ಬೆಂಗಳೂರು ನಗರದಲ್ಲಿ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್​ಗಳನ್ನು ತೆರವುಗೊಳಿಸುವ ವಿಚಾರವಾಗಿ ಇತ್ತೀಚೆಗಷ್ಟೇ ಬಿಬಿಎಂಪಿಯನ್ನು ಹೈಕೋರ್ಟ್​ ತರಾಟೆಗೆ ತೆಗೆದುಕೊಂಡಿತ್ತು. ಅದರ ಬೆನ್ನಲ್ಲೇ, ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್​ ಅಳವಡಿಸುವಂತಿಲ್ಲ ಎಂದು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದರು. ಇದಾದ ನಂತರವೂ ಹೇಳಿಕೊಳ್ಳುವ ಮಟ್ಟಿನ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದಿದ್ದ ಹೈಕೋರ್ಟ್​, ಸರ್ಕಾರಕ್ಕೆ ಛೀಮಾರಿ ಹಾಕಿತ್ತು.

Leave A Reply

Your email address will not be published.