ಚಿತ್ರದುರ್ಗ :2024-25 ನೇ ಪ್ರಸಕ್ತ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್ ಹಿರಿಯೂರಿನ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಸೀಟುಗಳಿಗೆ ಆನ್‍ಲೈನ್ ಮುಖಾಂತರ ಹಂಚಿಕೆಯಾಗದೆ ಉಳಿದ ಸೀಟುಗಳಿಗೆ ಮೆರಿಟ್ ರೋಷ್ಟರ್ ಆಧಾರಿತ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಾತಿಗೆ ಸಲ್ಲಿಸಬೇಕಾದ ದಾಖಲೆಗಳು: ಪ್ರವೇಶಾತಿ ಬಯಸುವ ಅರ್ಹ ವಿದ್ಯಾರ್ಥಿಗಳು ಮೂಲ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಮೂಲ ವರ್ಗಾವಣೆ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಹಾಗೂ ಗ್ರಾಮೀಣ ಮಾಧ್ಯಮ ಪ್ರಮಾಣ ಪತ್ರ ಮತ್ತು ವ್ಯಾಸಾಂಗ ದೃಢೀಕರಣ ಪತ್ರದೊಂದಿಗೆ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸುವರ್ಣವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೇ ಮೇ.30 ರಿಂದ ಪ್ರಾರಂಭವಾಗಲಿದ್ದು, ಜೂನ್ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್ 05ರಂದು ಮೆರಿಟ್ ಪಟ್ಟಿ ಬಿಡುಗಡೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿಯ ದೂರವಾಣಿ ಸಂಖ್ಯೆ 9900337587, 9482787542 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.