ಬೆಂಗಳೂರು: ಡಿಪ್ಲೋಮಾ ಮತ್ತು ಪದವೀಧರರಿಗೆ ಪ್ರತಿ ತಿಂಗಳು 1500 ರಿಂದ 3000 ರೂ. ನೀಡುವ ಯುವ ನಿಧಿ ಯೋಜನೆಯನ್ನು ನವೆಂಬರ್ ಕೊನೆಯ ವಾರದಲ್ಲಿ ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿರುವುದಾಗಿ ವರದಿಯಾಗಿದೆ.
ಮೈಸೂರು ನಗರದಲ್ಲಿ ಈ ಮಹತ್ವದ ಗ್ಯಾರಂಟಿ ಯೋಜನೆಗೆ ಚಾಲನೆ ನೀಡುವ ಬಗ್ಗೆ ಮೈಸೂರು ಜಿಲ್ಲೆಯ ಶಾಸಕರ ಸಭೆಯಲ್ಲಿ ಚರ್ಚಿಸಲಾಗಿದೆ.
ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಕೂಡ ಹೇಳಿದ್ದಾರೆ.