ದಾವಣಗೆರೆ; 2023-24ನೇ ಸಾಲಿಗೆ ಫಿಜಿಯೋಥೆರಪಿಸ್ಟ್‍ಗಳ ಸೇವೆಯನ್ನು ಕೆಲಸ ಮತ್ತು ಪಾವತಿ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ವಿಶೇಷ ಅಗತ್ಯವುಳ್ಳ ಮಕ್ಕಳ ಸಮನ್ವಯ ಶಿಕ್ಷಣ ಮಧ್ಯವರ್ತನ ಕಾರ್ಯಚಟುವಟಿಕೆಗಳ ಕಾರ್ಯ ಅನುಷ್ಠಾನಕ್ಕಾಗಿ ತೀವ್ರ ನ್ಯೂನತೆ ಹೊಂದಿರುವ ವಿಶೇಷ ಚೇತನ ಮಕ್ಕಳಲ್ಲಿ ಗುರುತಿಸಲ್ಪಟ್ಟಿರುವ ದೈಹಿಕ ನ್ಯೂನತೆ ಮತ್ತು ಬಹುನ್ಯೂನತೆ ಹೊಂದಿರುವ ಮಕ್ಕಳಿಗೆ ಫಿಜಿಯೋಥೆರಪಿ ಮೂಲಕ ನ್ಯೂನತೆಯ ಪ್ರಮಾಣವನ್ನು ತಗ್ಗಿಸುವ ದೃಷ್ಠಿಯಿಂದ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಅಗತ್ಯತೆ ಇರುವ ಮಕ್ಕಳಿಗೆ ಫಿಜಿಯೋಥೆರಪಿ ಸೇವೆ ಒದಗಿಸಲು ಡಿ.ಪಿ.ಟಿ ಅಥವಾ ಬಿ.ಪಿ.ಟಿ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಆಗಸ್ಟ್ 29 ಕೊನೆಯ ದಿನವಾಗಿರುತ್ತದೆ. ಅರ್ಜಿಯನ್ನು ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕೆ.ಇ.ಬಿ ಸರ್ಕಲ್, ದಾವಣಗೆರೆ ಇಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಹಿಂದಿರುಗಿಸಬೇಕು ಎಂದು ಡಿಡಿಪಿಐ ಜಿ.ಕೊಟ್ರೇಶ್ ತಿಳಿಸಿದ್ದಾರೆ