ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4 ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯು ಸೋಮವಾರ 57ನೇ ಸೆಷನ್ ಕೋರ್ಟ್ನಲ್ಲಿ ನಡೆಯಿತು. ಕಳೆದ ಶುಕ್ರವಾರ ಪವಿತ್ರ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಇಂದಿಗೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿತ್ತು. ಈಗ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನೂ ಮುಂದೂಡಲಾಗಿದೆ. ದರ್ಶನ್ ಮತ್ತು ಲಕ್ಷ್ಮಣ್ ಇಬ್ಬರ ಅರ್ಜಿ ಮುಂದೂಡಲಾಗಿದೆ.
