ಕೋಲಾರ: ಕರ್ನಾಟಕ ರಿಪಬ್ಲಿಕ್ ಸೇನೆಯ ರಾಜ್ಯಾಧ್ಯಕ್ಷ ಹಾಗೂ ಹಿರಿಯ ಹೋರಾಟಗಾರ, ದಲಿತ ಪರ ಹೋರಾಟದ ಮುಂಚೂಣಿ ನಾಯಕರಲ್ಲಿ ಒಬ್ಬರಾದ ಜಿಗಣಿ ಶಂಕರ್ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕೆ ಕೋಲಾರಕ್ಕೆ ಹೋಗಿದ್ದಾಗ ಹಾರ್ಟ್ ಅಟ್ಯಾಕ್ ಆಗಿರುವುದಾಗಿ ವರದಿಯಾಗಿದೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜಿಗಣಿ ಬಳಿಯ ಬಂಡೇನಲ್ಲಸಂದ್ರ ಗ್ರಾಮದಲ್ಲಿರುವ ನಿವಾಸದ ಬಳಿ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳ ಪರವಾಗಿ ಅಪಾರ ಕಾಳಜಿ ಹೊಂದಿದ್ದರು. ಶಂಕರ್ ಯುವ ಪೀಳಿಗೆಗೆ ಸ್ಪೂರ್ತಿದಾಯಕವಾಗಿ ಹೋರಾಟದ ಕಿಚ್ಚು ಹಚ್ಚಿದ್ದರು.