ದೆಹಲಿ: ದೆಹಲಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ ಬಂದಿರುವ ಹಿನ್ನಲೆಯಲ್ಲಿ ಇದೀಗ ದೆಹಲಿ ಹೈಕೋರ್ಟ್ ಆವರಣದಲ್ಲಿ ಹೈ ಅಲರ್ಟ್ ಮಾಡಲಾಗಿದೆ.
ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದ್ದು, ರಿಜಿಸ್ಟ್ರಾರ್ ಜನರಲ್‌ಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.
ಇನ್ನು ಬುಧವಾರ ತಡರಾತ್ರಿ ಈ ಮೇಲ್ ಬಂದಿದ್ದು, ಹೈಕೋರ್ಟ್ ಮುಂದೆ ಬಾಂಬ್ ಹಾಕಲಾಗುವುದು ಎಂದು ಇದರಲ್ಲಿ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.