ಹಾವೇರಿ: ದೇವೇಗೌಡರು ಇರುವ ಮೈತ್ರಿ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರು ನುಗ್ಗಿರುವುದು ಅತ್ಯಂತ ಖಂಡನೀಯ. ಕನ್ನಡಿಗರ ಹೆಮ್ಮೆಯ ಮಾಜಿ ಪ್ರಧಾನಿ ಅವರ ಸಭೆಯಲ್ಲಿ ಹೀಗೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ರೌಡಿಸಂನ್ನು ಜನರು ತಿರಸ್ಕಾರ ಮಾಡುತ್ತಾರೆ. ಇದು ಕಾಂಗ್ರೆಸ್ ನವರ ಹತಾಶೆ ತೋರಿಸುತ್ತದೆ. ಹಲವು ಸಂದರ್ಭದಲ್ಲಿ ಕರ್ನಾಟಕ, ಕನ್ನಡದ ಪರ ನಿಂತವರು ದೇವೇಗೌಡರು ಎಂದರು.
ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎನ್ನುವ ಎಚ್.ಡಿ.ಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನವರು ಮಹಿಳೆಯರ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಹೇಳಿದರು.
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ದೇವೇಗೌಡರಿಗೆ ರಾಜಕೀಯ ಹೇಳಿಕೊಡುವಷ್ಟು ದೊಡ್ಡವರು ಯಾರೂ ಇಲ್ಲ. ಸಿದ್ದರಾಮಯ್ಯ ಸಹ ದೇವೇಗೌಡರ ಗರಡಿಯಲ್ಲಿ ಪಳಗಿದವರು ಅವರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಿಎಂಗೆ ತಿರುಗೇಟು ನೀಡಿದರು.
				
															
                    
                    
                    
                    
                    
































