ಧರ್ಮಸ್ಥಳ: ಸೌಜನ್ಯ ಅತ್ಯಾಚಾರ ಪ್ರಕರಣ ಇದೀಗ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಡಾ.ವಿರೇಂದ್ರ ಹೆಗಡೆ ಅವರ ಹೆಸರು ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ಬೆಂಬಲಿಗರಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಇದೀಗ ಪ್ರತಿಭಟನೆಯಲ್ಲಿ ಜಸ್ಟಿಸ್ ಫಾರ್ ಸೌಜನ್ಯ ಪೋಸ್ಟರ್ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸುತ್ತ ವೇದಿಕೆಯತ್ತ ತೆರಳಿಸ ಸೌಜನ್ಯ ತಾಯಿ ಕುಸುಮಾವತಿಯನ್ನು ಪೊಲೀಸರು ತಡೆದಿದ್ದಾರೆ.
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಪರವಾಗಿ ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ‘ಜಸ್ಟಿಸ್ ಫಾರ್ ಸೌಜನ್ಯ’ ಎಂಬ ಪ್ಲೆಕಾರ್ಡ್ ಹಿಡಿದು ಕಾಣಿಸಿಕೊಂಡಿದ್ದಾರೆ. ಈ ವೇಳೆ ಸೌಜನ್ಯ ಸಹೋದರ ಸುಭಾಷ್ ಚಂದ್ರ ಮೇಲೆ ಪ್ರತಿಭಟನಾನಿರತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾನೆ.
ಈ ಕುರಿತು ಸೌಜನ್ಯ ಸಹೋದರಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ನ್ಯಾಯ ಕೇಳಲು ಬಂದರೆ ನನ್ನ ತಮ್ಮನಿಗೆ ಹಲ್ಲೆ ಮಾಡಲು ಮುಂದಾಗುತ್ತಾರೆ. ನ್ಯಾಯ ಕೇಳುವುದು ತಪ್ಪಾ. ಧರ್ಮಸ್ಥಳ ಗ್ರಾಮದಲ್ಲಿದ್ದು ಧರ್ಮಸ್ಥಳದ ಹೆಸರು ಎತ್ತದೆ ನ್ಯಾಯ ಕೇಳುವುದು ಹೇಗೆ ಎಂದು ಪ್ರಶ್ನಿಸಿದ ಅವರು, ನಾವು ಯಾವುದೇ ಕಾರಣಕ್ಕೂ ಶ್ರೀಕ್ಷೇತ್ರದ ಹೆಸರು ತೆಗೆದಿಲ್ಲ. ನಮ್ಮ ತಾಯಿ ಅಕ್ಕ ಸೌಜನ್ಯಳಿಗೆ ನ್ಯಾಯಕ್ಕಾಗಿ ಆಯೋಜಿಸುವ ಪ್ರತಿ ಹೋರಾಟದಲ್ಲಿ ಭಾಗಿಯಾಗಿತ್ತಾರೆ ಎಂದರು.