ಮುಂಬೈ: ನನಗೆ ಹಾಗೂ ನನ್ನ ಪತ್ನಿಗೆ ಕಳೆದ ಕೆಲವು ದಿನಗಳಿಂದ ಜೀವ ಬೆದರಿಕೆ ಕರೆಗಳು ಮತ್ತು ಅಶ್ಲೀಲ ಸಂದೇಶಗಳು ಬರುತ್ತಿವೆ. ನನ್ನ ಕುಟುಂಬಕ್ಕೆ ರಕ್ಷಣೆ ಬೇಕು ಎಂದು ಲಂಚ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಮಾಜಿ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅವಲತ್ತುಕೊಂಡಿದ್ದಾರೆ.
ಭದ್ರತೆ ಕೋರಿ ಮುಂಬೈ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯುವುದಾಗಿ ವಾಂಖೆಡೆ ತಿಳಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು ₹25 ಕೋಟಿ ಲಂಚ ಸ್ವೀಕರಿಸಿದ್ದಾರೆ ಎಂಬ ಆರೋಪ ಸಮೀರ್ ವಾಂಖೆಡೆ ಅವರ ಮೇಲಿದೆ.