ಬೆಂಗಳೂರು: ನನಗೆ ಮತದಾನೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗಳಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಸಲಾಗುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ.
ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ಎಂದು ತಿಳಿಸಿದ್ದಾರೆ.