Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ನನಗೆ ಸಿಎಂ ಮಾಡೋದು ಇಳಿಸೋದು ಗೊತ್ತು – ಸಿಎಂ ಸಿದ್ದು ವಿರುದ್ಧ ಮತ್ತೆ ಗುಡುಗಿದ ‘ಕೈ’ ಹಿರಿಯ ನಾಯಕ

0

ಬೆಂಗಳೂರು : ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ, ಎಂಎಲ್​ಸಿ ಬಿ.ಕೆ.ಹರಿಪ್ರಸಾದ್​ ಮತ್ತೆ ಗುಡುಗಿದ್ದಾರೆ. ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ, ಎದೆ ಕೊಟ್ಟು ನಿಲ್ಲುತ್ತೇನೆ. ನಾನು ಮಂತ್ರಿ ಆಗೋದು ಬಿಡೋದು ಬೇರೆ ಪ್ರಶ್ನೆ. ಐವರನ್ನು ಸಿಎಂ ಆಯ್ಕೆ ಮಾಡುವುದರಲ್ಲಿ ನಾನು ಪಾತ್ರವಹಿಸಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಖಾಸಗಿ ಹೊಟೇಲ್​ನಲ್ಲಿ ನಡೆದ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಬಿ.ಕೆ.ಹರಿಪ್ರಸಾದ್ ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಸಮುದಾಯದ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಕರ್ನಾಟಕದಲ್ಲಿ ರಾಜಕೀಯವಾಗಿ ಈ ಸಮುದಾಯದವರು ಮುಂದೆ ಬರುತ್ತಿಲ್ಲ. ಏನೇ ಪ್ರಯತ್ನ ಮಾಡಿದ್ರು ಆಗುತ್ತಿಲ್ಲ. ಅವಕಾಶ ವಂಚಿತರಾಗುತ್ತಿರುವುದು ನೋಡಿದರೆ ಯಾರದ್ದೊ ಷಡ್ಯಂತ್ರಕ್ಕೆ ಬಲಿಯಾಗುತ್ತಿದ್ದೇವೆ ಅನಿಸುತ್ತದೆ. ಸಿದ್ದರಾಮಯ್ಯ ಹಿಂದುಳಿದ ವರ್ಗಕ್ಕೆ ಸೇರಿದವರು. ಎಲ್ಲರ ಒಟ್ಟಿಗೆ ಸೇರಬೇಕು ಎಂದು ನಾವು 2013 ರಲ್ಲಿ ಬೆಂಬಲ ಕೊಟ್ಟಿದ್ದೇವು. ಬೆಂಬಲ ಕೊಟ್ಟ ಬಳಿಕ ನಾವು ಕಾಂಗ್ರೆಸ್ ಆಗಲಿ, ಮಂತ್ರಿಗಳಾಗಲಿ ಯಾರ ಬಳಿಯೂ ಕೈ ಚಾಚುವುದಿಲ್ಲ. ಹಿಂದುಳಿದ ವರ್ಗಕ್ಕೆ ಯಾವ ರೀತಿ ಅನುಕೂಲ ಮಾಡಬೇಕು ಎಂದು ಯೋಚನೆ ಮಾಡ್ತೇವೆ. ಸ್ವಾರ್ಥಕ್ಕೆ ಯಾವುದು ಕೇಳಲ್ಲ ಎಂದು ಬಿಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

Leave A Reply

Your email address will not be published.