Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ನವದೆಹಲಿ: ನೂತನ ಸಂಸತ್ ಭವನ ರಾಷ್ಟ್ರಪತಿ ಉದ್ಘಾಟಿಸಲಿ – ಸುಪ್ರೀಂಗೆ ಅರ್ಜಿ

0

ನವದೆಹಲಿ: ನೂತನ ಸಂತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುವು ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ಭಾರೀ ವಿವಾದವೇ ಏರ್ಪಟ್ಟಿದೆ.

ಈ ನಡುವೆ ನೂತನ ಸಂತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅವಕಾಶ ನೀಡಬೇಕು ಎಂದು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದು ಸುಪ್ರಿಂಕೋರ್ಟ್ ಗೆ ಸಲ್ಲಿಕೆಯಾಗಿದೆ. ಅರ್ಜಿದಾರರ ವಕೀಲ ಜಯ ಸುಕಿನ್ ಅವರು ಸಲ್ಲಿಸಿದ ಅರ್ಜಿಯಲ್ಲಿರುವ ಪ್ರಕಾರ, “ಲೋಕಸಭೆ ಸೆಕ್ರೆಟರಿಯೇಟ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸದೆ ಸಂವಿಧಾನ ಉಲ್ಲಂಘಿಸಿದೆ. ಸಂಸತ್ತು ಭಾರತದ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಭಾರತೀಯ ಸಂಸತ್ತು ರಾಷ್ಟ್ರಪತಿ ಮತ್ತು ರಾಜ್ಯಸಭೆ ಮತ್ತು ಲೋಕಸಭೆ ಎಂಬ ಎರಡು ಸದನಗಳನ್ನು ಒಳಗೊಂಡಿದೆ – ಸಂಸತ್ತಿನ ಸದನವನ್ನು ಕರೆಯಲು ಮತ್ತು ಮುಂದೂಡಲು ಅಥವಾ ಲೋಕಸಭೆಯನ್ನು ವಿಸರ್ಜಿಸಲು ರಾಷ್ಟ್ರಪತಿಗಳಿಗೆ ಅಧಿಕಾರವಿದೆ “ಎಂದು ಹೇಳಲಾಗಿದೆ.

ಉತ್ತರಾಖಂಡ್: ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

ಇನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ನೂತನ ಸಂಸತ್ ಭವನದ ಸಮಾರಂಭವನ್ನು ಬಹಿಷ್ಕರಿಸುವ ನಿರ್ಧಾರವನ್ನು 20 ಪ್ರತಿಪಕ್ಷಗಳು ಪ್ರಕಟಿಸಿವೆ.

“ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ಬದಿಗೊತ್ತಿರುವ ಪ್ರಧಾನಿ ಮೋದಿಯವರು ಹೊಸ ಸಂಸತ್ತಿನ ಕಟ್ಟಡವನ್ನು ಸ್ವತಃ ಉದ್ಘಾಟಿಸುವ ನಿರ್ಧಾರವು ಘೋರ ಅವಮಾನ ಮಾತ್ರವಲ್ಲ, ಇದು ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ” ಎಂದು ತಮ್ಮ ಜಂಟಿ ಹೇಳಿಕೆಯಲ್ಲಿ ವಿರೋಧ ಪಕ್ಷಗಳು ಹೇಳಿವೆ.

 

Leave A Reply

Your email address will not be published.